Bomb threat: ಬೆಂಗಳೂರಿನ ಎರಡು ಪ್ರತಿಷ್ಟಿತ ಹೋಟೆಲ್ಗಳಿಗೆ ಬಾಂಬ್ ಬೆದರಿಕೆ: ಡಿಸಿಪಿ ಕೊಟ್ಟ ಸ್ಪಷ್ಟನೆ ಏನು?
Bomb threat: ಬೆಂಗಳೂರು(Bengaluru) ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಗೆ(Taj Westend), ಒಟೆರಾ ಗೆ ದುಷ್ಕರ್ಮಿಗಳು ಇ ಮೇಲ್(E mail) ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ತಾಜ್ ವೆಸ್ಟೆಂಡ್ ಹೆಚ್ಚಾಗಿ ರಾಜಕಾರಣಿಗಳು(Politicians), ಕ್ರಿಕೆಟರ್ ಗಳು(Cricketers) ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್. ಇಂದು ಇ ಮೇಲ್ ಮೂಲಕ ಬೆದರಿಕೆ ಪತ್ರ ರವಾನೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ನಗರದ ಮತ್ತೊಂದು ಹೋಟೆಲ್ಗೆ ಬಾಂಬ್ ಬೆದರಿಕೆ((bomb threat) ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಈ ಮೂಲಕ ಒಂದೇ ದಿನ ನಗರದ ಎರಡು ಪ್ರತಿಷ್ಠಿತ ಹೋಟೆಲ್ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್ನ್ನು ತಪಾಸಣೆ ಮಾಡಲಾಗುತ್ತಿದೆ. ಹಾಗೆ ತಾಜ್ ವೆಸ್ಟ್ ಎಂಡ್ ಹೊಟಟೇಲ್ಗೂ ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು(Police), ಬಾಂಬ್ ಸ್ಕ್ವಾಡ್(Bomb Squad) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್, ಇದೊಂದು ಹುಸಿ ಬಾಂಬ್ ಇ ಮೇಲ್ ಬೆದರಿಕೆ ಅನ್ನೋದು ಗೊತ್ತಾಗಿದೆ. ಸ್ಥಳಕ್ಕೆ ಬಾಂಬ್ ಸ್ಕ್ವಾಂಡ್ ,ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದರು. ಸದ್ಯ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.