Mosques: ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು!

Mosques: ಗುಜರಾತ್‌ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ 9 ಮಸೀದಿ (Mosques) ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಹೌದು, ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಅಲ್ಲದೇ ಈ ಭೂಮಿಯಲ್ಲಿ ಐವತ್ತಕ್ಕೂ ಹೆಚ್ಚು ಕಟ್ಟಡಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಲಾಗಿದೆ.

ಮಾಹಿತಿ ಪ್ರಕಾರ, ಸೋಮನಾಥ ದೇವಾಲಯದ 1.5 ಕಿಮೀ ದೂರದಲ್ಲಿರುವ 103 ಎಕರೆ ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಂಡಿರುವುದು ಪೊಲೀಸ್ ಮತ್ತು ಆಡಳಿತಾತ್ಮಕ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ. ನಂತರ ಜಿಲ್ಲಾಧಿಕಾರಿ ಸೋಮನಾಥದಲ್ಲಿನ ಅಕ್ರಮ ಒತ್ತುವರಿಯನ್ನು ತೆರವು ಮಾಡುವಂತೆ ಆಡಳಿತದಿಂದ ಬಹಳ ಹಿಂದೆಯೇ ನೋಟಿಸ್ ನೀಡಲಾಗಿತ್ತು ಆದರೆ, ಈ ಎಚ್ಚರಿಕೆಗಳನ್ನು ಕಡೆಗಣಿಸಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆದ್ದರಿಂದ ಈ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಭಾಗವಾಗಿ 45 ವಸತಿ ಕಟ್ಟಡಗಳ ಜೊತೆಗೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ನೆಲೆಸಮಗೊಳಿಸಲಾಗಿದೆ. ಇದರ ಪರಿಣಾಮ ಸುಮಾರು 320 ಕೋಟಿ ಮೌಲ್ಯದ ಅಂದಾಜು 102 ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.

Leave A Reply

Your email address will not be published.