Mysuru: ದಸರಾ ಹೊತ್ತಲ್ಲಿ ರೇವ್ ಪಾರ್ಟಿ?!: ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಹಲ್ಲೆ

Mysuru: ಮೈಸೂರು ನಗರದ ಹೊರವಲಯದಲ್ಲಿ ಮಧ್ಯರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮಧ್ಯೆ (Reva Party) ಮೈಸೂರು ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ (Rapper Grain Ripper) ಬಂದಿದ್ದು, ಪಾರ್ಟಿ ಆಯೋಜಕರಿಂದ ಪಾರ್ಟಿಗೆ ಬರಲು ತಲಾ 2000 ರೂ. ಹಣವನ್ನು ನಿಗದಿ ಮಾಡಿದ್ದರು. ಸುಮಾರು 150ಕ್ಕೂ ಹೆಚ್ಚು ಯುವಕ ಯುವತಿಯರು ಸೇರಿ ಪಾರ್ಟಿ ಮಾಡುತಿದ್ದ ವೇಳೆ ಮೈಸೂರು ಜಿಲ್ಲಾ ಪೊಲೀಸರು ದಿಢೀರ್ ಎಂಟ್ರಿ ಕೊಟ್ಟಿದ್ದು, ಪಾರ್ಟಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ, ಅಲ್ಲದೇ ಹಲವರು ಓಡಿ ಹೋಗಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.

ಈ ಕುರಿತು, ಎಸ್‌ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿ ನಡೆದ ಸ್ಥಳದಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ (FSL) ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಪರೀಕ್ಷೆ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.