Weather Report: ರಾಜ್ಯದ ಹವಾಮಾನ ವರದಿ: ಈ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ!

Share the Article

Weather Report: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಹುತೇಕ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ( coastal) ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ( heavy rain) ಮುನ್ಸೂಚನೆ ಇದೆ. ಇಂದಿನಿಂದ ಅಕ್ಟೋಬರ್ 12 ರವರೆಗೆ ಭಾರೀ ಮಳೆಯಗುವ ಸೂಚನೆಯನ್ನು ಹವಾಮಾನ ಇಲಾಖೆ( IMD) ನೀಡಿದೆ.

ಭಾರೀ ಮಳೆ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ ಹಾಗೂ ಕೋಲಾರದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

Leave A Reply