Home News By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ !!

By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ !!

Hindu neighbor gifts plot of land

Hindu neighbour gifts land to Muslim journalist

By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಗೆ(By Election) ಮುಹೂರ್ತ ಫಿಕ್ಸ್‌ ಆಗಿದ್ದು, ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಹಾಗಿದ್ರೆ ಯಾವಾಗ ಚುನಾವಣೆ ಗೊತ್ತಾ? ಇಲ್ಲಿದೆ ನೋಡಿ ಡೀಟೇಲ್ಸ್

ಹೌದು, ಕೇಂದ್ರ ಚುನಾವಣಾ ಆಯೋಗವು(Election Commission) ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಇದರ ಜೊತೆಗೆ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ(ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ
ದಿನಾಂಕವನ್ನೂ ಸಹ ಪ್ರಕಟಿಸಿದೆ.

ಯಾವಾಗ ಚುನಾವಣೆ, ಮತ ಎಣಿಕೆ?
ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ

ಪ್ರಮುಖ ದಿನಾಂಕಗಳು:
* ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟ
* ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಅಕ್ಟೋಬರ್​ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
* ಅಕ್ಟೋಬರ್​ ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ

ಅಂದಹಾಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರುಗಳ ರಾಜೀನಾಮೆಯಿಂದ ಮೂರು ವಿಧಾನಸಭಾ ಕ್ಷೇತ್ರಗಳ ಸ್ಥಾನ ತೆರವಾಗಿದ್ವು. ಮೂವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಶಾಸಕರ ರಾಜೀನಾಮೆಯಿಂದ ಯಾವುದೇ ಕ್ಷೇತ್ರ ತೆರವಾದ್ರೆ ಮುಂದಿನ 6 ತಿಂಗಳೊಳಗೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕು. ಹೀಗಾಗಿ ಚುನಾವಣಾ ಆಯೋಗ ನವೆಂಬರ್‌ 13 ರಂದು ಚುನಾವಣೆ ನಡೆಸಲು ದಿನಾಂಕವನ್ನ ಘೋಷಿಸಿದೆ.