Basanagouda Patil Yatnal: ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ – ಕೋರ್ಟ್ ನಿಂದಲೇ ಮಹತ್ವದ ಆದೇಶ !! ಕಾರಣ ಏನು?

Basanagouda Patil Yatnal: ಶಾಸಕ ಬಸನಗೌಡ ಯತ್ನಾಳ್‌ಗೆ (Basangouda Patil Yatnal) 24ನೇ ಎಸಿಎಂಎಂ ಕೋರ್ಟ್‌ (ACMM Court) ಜಾಮೀನು ರಹಿತ ವಾರೆಂಟ್ (Non-Bailable warrant ) ಜಾರಿ ಮಾಡಿದೆ

ಹೌದು, ಬಸನಗೌಡ ಶಾಸಕ ಯತ್ನಾಳ್‌ ಅವರು ಸಚಿವ ದಿನೇಶ್‌ ಗುಂಡೂವಾರ್‌ ಹೆಂಡತಿ ವಿರುದ್ಧ ನೀಡಿದ್ದ ಹೇಳಿಕೆ ಕೇಸ್‌ ಅನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋರ್ಟ್ ಗರಂ ಆಗಲು ಕಾರಣ?
ದಿನೇಶ್‌ ಗುಂಡೂರಾವ್ (Dinesh Gundu Rao) ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಯತ್ನಾಳ್ ವಿರುದ್ಧ ದಿನೇಶ್‌ಗುಂಡೂರಾವ್ ಪತ್ನಿ ಟಬು ರಾವ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ತಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಪುರಸ್ಕರಿಸಿದ್ದ ಕೋರ್ಟ್‌ ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿದೆ.

ವಿವಾದಿತ ಹೇಳಿಕೆ ನೀಡಿದ್ದ ಶಾಸಕ:
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ (Rameshwaram Cafe Blast Case) ಸಂಬಂಧ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್‌ ಗುಂಡೂರಾವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದನ್ನೇ ಇಟ್ಟುಕೊಂಡು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಯತ್ನಾಳ್‌ ‘ದಿನೇಶ್‌ ಗುಂಡೂರಾವ್‌ ಮನೆಯಲ್ಲಿಅರ್ಧ ಪಾಕಿಸ್ತಾನ ಇದೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ತಬಸುಮ್‌ ಅವರು ಯತ್ನಾಳ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

Leave A Reply

Your email address will not be published.