ED Raid on MUDA: ಮೂಡಾ ಕಚೇರಿ ಮೇಲೆ ಇಡಿ ದಾಳಿ

Share the Article

ED Raid on MUDA: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಆರ್‌ಐಟಿಐ ಕಾರ್ಯಕರ್ತ ಸ್ನೇಹಮಹಿ ಕೃಷ್ನ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮೂಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮೂಡಾ ಕಚೇರಿ, ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಕೆಂಗೇರಿಯಲ್ಲಿ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರು 500 ಪುಟಗಳ ಹಗರಣ ಕುರಿತ ದಾಖಲೆಗಳನ್ನು ಇಡಿಗೆ ನೀಡಿದ್ದರು.

 

Leave A Reply