Board Exam: 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Board Exam: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ (Board Exam) ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೌದು, ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2 (ಎಸ್‌ಎ-2) ಮತ್ತು 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಮಧು ಬಂಗಾರಪ್ಪ, ಈ ನಾಲ್ಕೂ ತರಗತಿಗಳಿಗೆ ಮಂಡಳಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲ ಖಾಸಗಿ ಶಾಲಾ ಸಂಘಟನೆಗಳು ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯವು ಮಂಡಳಿ ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ಫಲಿತಾಂಶವನ್ನು ತಡೆಹಿಡಿದಿದ್ದು, ನಡ ವಳಿಕೆ ಕುರಿತು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದೇವೆ ಎಂದಿದ್ದಾರೆ.

1 Comment
  1. Antoniorep says

    Source:

    https://kra-10at.run

    ссылка кракен vtor run

Leave A Reply

Your email address will not be published.