Kerala: Kerala: ವಯನಾಡ್ ಲೋಕಸಭಾ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯ ನವ್ಯಾ ಹರಿದಾಸ್ ಅಭ್ಯರ್ಥಿ
Kerala: ನವ್ಯಾ ಹರಿದಾಸ್ ಅವರನ್ನು ವಯನಾಡು ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ನಂತರ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರ ಉಳಿಸಿ, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಂತರ ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿಯನ್ನು ವಯನಾಡಿನಿಂದ ಚುನಾವಣೆಗೆ ಕಣಕ್ಕಿಳಿಸಲು ನಿರ್ಧಾರ ಮಾಡಿತು.
ವಯನಾಡ್ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.
ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಿಂದ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ.
ನವ್ಯಾ ಹರಿದಾಸ್ ಅವರು ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪ್ರಸ್ತುತ ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಹೊಂದಿದ್ದಾರೆ.
ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 13 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.