Mangalore: ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Mamgalore : ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಎಂದೇ ಬಿರುದಾಂಕಿತ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದರು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಅವರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ ಶ್ಯಾಮಲಾ ,ಮಕ್ಕಳಾದ ಕು| ವರ್ಷಾ, ವರುಣ್ ಅವರನ್ನು ಅಗಲಿದ್ದಾರೆ. ಬಂಟ್ವಾಳ ಜಯರಾಮ ಆಚಾರ್ಯ ಅವರು ಕಳೆದ 50 ವರ್ಷಗಳಿಂದ ಪಾತ್ರಗಳಿಗೆ ಹಾಸ್ಯರಸದ ಸ್ಪರ್ಶ ನೀಡಿ ಸಾವಿರಾರು ಸನ್ನಿವೇಶಗಳನ್ನು ರಂಜನೀಯವನ್ನಾಗಿಸಿ ಯಕ್ಷ ಪ್ರೇಕ್ಷಕರ ಮನಗೆದ್ದವರು.

ಹಾಸ್ಯಪಾತ್ರಗಳೊಂದಿಗೆ ಗಂಭೀರ ಪಾತ್ರಗಳನ್ನೂ ಮಾಡಬಲ್ಲ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ದುಬೈ ಹಾಗೂ ಇನ್ನಿತರ ಹಲವಾರು ಕಡೆಯ ಸಂಘ ಸಂಸ್ಥೆಗಳಲ್ಲಿ ಪ್ರಶಸ್ತಿ ಸನ್ಮಾನಗಳಿಗೆ ಪಾತ್ರರಾಗಿದ್ದರು. ಹಾಸ್ಯಗಾರ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರು ಪ್ರಸ್ತುತ ಶ್ರೀ ಹನುಮಗಿರಿ ಮೇಳದ ಕಲಾವಿದರು.

ಸರಳ, ಸಜ್ಜನ, ನಿಗರ್ವಿ, ವಿನಯವಂತ ಹಾಸ್ಯಗಾರರು. ಇವರು ಜನಿಸಿದ್ದು 12-10-1957ರಂದು. ತಂದೆ ಬಂಟ್ವಾಳ ಗಣಪತಿ ಆಚಾರ್ಯ, ತಾಯಿ ಶ್ರೀಮತಿ ಭವಾನಿ ಅಮ್ಮ. ಗಣಪತಿ ಆಚಾರ್ಯರು ತನ್ನ ಕುಲವೃತ್ತಿಯಾದ ಚಿನ್ನದ ಕೆಲಸ ಮಾಡುವುದು ಮಾತ್ರವಲ್ಲದೆ ಆ ಕಾಲದ ಉತ್ತಮ ಕಲಾವಿದರಾಗಿದ್ದರು. ಹಾಸ್ಯಗಾರರಾಗಿ ಕಲಾಸೇವೆಯನ್ನು ಮಾಡುತ್ತಿದ್ದವರು. ಬಳ್ಳಂಬೆಟ್ಟು, ಹೆರ್ಗ, ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.

Leave A Reply

Your email address will not be published.