Accident: ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ! ಯುವತಿ ಸ್ಥಳದಲ್ಲೇ ಸಾವು
Accident: ಮಂಗಳೂರು ನಗರದ ಹೆದ್ದಾರಿಯಲ್ಲಾದ ನಂತೂರು ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಹೌದು, ಭಾನುವಾರ ಸಂಜೆ ಮಂಗಳೂರು ನಂತೂರು ವೃತ್ತದ ಬಳಿ ಶಾಂತಿ ಕಿರಣ ಎದುರಿನಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವತಿಗೆ ಟಿಪ್ಪರ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ (Accident) ನಡೆದಿದೆ.
ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿಯಾಗಿದ್ದಾರೆ.
ಕ್ರಿಸ್ತಿ ಎಂಬಾಕೆ ನಂತೂರು ವೃತ್ತದ ಕಡೆಯಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಮೀನು ಸಾಗಿಸುವ ಕಂಟೇನರ್ ಲಾರಿ ಡಿಕ್ಕಿಯಾಗಿದೆ. ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯಿಂದಾಗಿ ಕ್ರಿಸ್ತಿ ಸ್ಕೂಟರಿಗೆ ಡಿಕ್ಕಿಯಾಗಿದ್ದು ಹಿಂದಿನ ಚಕ್ರಕ್ಕೆ ಸಿಲುಕಿದ ಕ್ರಿಸ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದೀಗ ಲಾರಿ ಚಾಲಕನನ್ನು ಪೊಲೀಸರುವ ಶಕ್ಕೆ ಪಡೆದಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.