Wayanadu By Election: ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ !! AICC ಅಧ್ಯಕ್ಷ, ದಲಿತ ನಾಯಕನಿಗೆ ಇದೆಂಥಾ ಸ್ಥಿತಿ, ಅವಮಾನ ?!

Wayanadu By Election: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ವೇಳೆ ಅವರು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೆ ಬಿಟ್ಟುಕೊಳ್ಳದೆ ಬಾಗಿಲ ಹೊರಗೆ ನಿಲ್ಲಿಸಿ ಅಗೌರವ ತೋರಿದ್ದಾರೆ ಎನ್ನಲಾಗಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.

ಹೌದು, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಂಗಳವಾರ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ನಾಮಪತ್ರ ಸಲ್ಲಿಕೆ ಮಾಡುವ ಕೋಣೆಯ ಒಳಗೆ ಪ್ರವೇಶ ನೀಡದೇ ಅವಮಾನ ಮಾಡಿರಯವ ಘಟನೆ ನಡೆದಿದೆ. ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೋ ಭಾರಿ ಪ್ರಮಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಇದು ಕಾಂಗ್ರೆಸ್‌ ದಲಿತ ನಾಯಕರಿಗೆ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಮಾಡಿರುವ ಅವಮಾನ ಎಂದು ಹೇಳಿದೆ.

ಅಸಲಿಗೆ ಆಗಿದ್ದೇನು?
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ. ಆದರೆ ಈ ನಾಮಪತ್ರ ಸಲ್ಲಿಸೋ ವೇಳೆ ನಡೆದ ಒಂದು ಘಟನೆ ಸಿಕ್ಕಾಪಟ್ಟೆ ಚರ್ಚೆಗೆ ಕಾರಣವಾಗಿದೆ.

ಕುಟುಂಬಕ್ಕೆ ಮಾತ್ರ ‘ಕೈ’ ಸೈ?
ಪ್ರಿಯಾಂಕಾ ಗಾಂಧಿ ನಾಮಿನೇಷನ್‌ ಸಲ್ಲಿಸೋ ವೇಳೆ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಪ್ರಿಯಾಂಕಾ ಗಾಂಧಿ ನಾಮಿನೇಷನ್‌ ಸಲ್ಲಿಸೋ ವೇಳೆ ಕೇವಲ ಕುಟುಂಬಸ್ಥರು ಮಾತ್ರ ಒಳಗೆ ಹೋಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತ್ರ ಬಾಗಿಲ ಬಳಿಯಲ್ಲಿ ನಿಂತು ಒಳಗೆ ಇಣುಕಿ ನೋಡುತ್ತಿರವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋ ಇಟ್ಟುಕೊಂಡು ಬಿಜೆಪಿ ಪಕ್ಷ ಕಾಂಗ್ರೆಸ್‌ ವಿರುದ್ಧ ಗರಂ ಆಗಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?
ಪ್ರಿಯಾಂಕಾ ವಾದ್ರಾ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಇದ್ದಿರುವುದು ನಿಜ. ವೈರಲ್‌ ಆಗಿರುವ ವಿಡಿಯೋ ಕೂಡ ನಿಜ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಅಭ್ಯರ್ಥಿಗಳು ಒಂದು ಕ್ಷೇತ್ರಕ್ಕೆ ಒಂದೇ ನಾಮಿನೇಷನ್‌ಅನ್ನು ಹಾಕೋದಿಲ್ಲ. ಎರಡು ಮೂರು ಸೆಟ್‌ಗಳನ್ನು ಸಲ್ಲಿಕೆ ಮಾಡುತ್ತಾರೆ. ಒಂದು ಸೆಟ್‌ ಸಲ್ಲಿಕೆ ಮಾಡುವ ವೇಳೆ ಮಲ್ಲಿಕಾರ್ಜುನ ಖರ್ಗೆ ಒಳಗಿದ್ದರು. ಮತ್ತೊಂದು ಸೆಟ್‌ ಸಲ್ಲಿಕೆ ಮಾಡುವಾಗ ಅವರನ್ನು ಹೊರಗಿಡಲಾಗಿತ್ತು.ಈ ವೇಳೆ ಅವರು ಬಾಗಿಲಿನ ಸಂದಿಯಿಂದ ಒಳಗಿನ ನಾಮಿನೇಷನ್‌ ಪ್ರಕ್ರಿಯೆಯನ್ನು ನೋಡುತ್ತಿರುವ ಒಂದು ಸೆಕೆಂಡ್‌ನ ವಿಡಿಯೋ ವೈರಲ್‌ ಆಗಿದೆ.

https://x.com/MithilaWaala/status/1849106274752848377?t=LIOt4kgy1tTnbLiVfWPQ5Q&s=19

ಇನ್ನು ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.