Channapatna By Election: NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ !!

Share the Article

Channapattana By Election: ಚನ್ನಪಟ್ಟಣ ಉಪಚುನಾವಣೆಗೆ NDA ಮೈತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ವಿಚಾರ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿತ್ತು. ಆದರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದ್ದು, ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ.

ಹೌದು, ಇದೀಗ ಚನ್ನಪಟ್ಟಣದಿಂದ(Channapattana By Election) ಜೆಡಿಎಸ್ ಮತ್ತು ಬಿಜೆಪಿ(JDS-BJP) ಮೈತ್ರಿ ಅಭ್ಯರ್ಥಿ ಯಾರೆಂಬುದು ಬಹುತೇಕ ಅಂತಿಮವಾಗಿದೆ. ಜೆಡಿಎಸ್ ಸಭೆಯಲ್ಲಿ ಚನ್ನಪಟ್ಟಣ ಟಿಕೆಟ್ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದಿಂದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ. ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಟಿಕೆಟ್ ಫೈನಲ್ ಕುರಿತು ಮೈತ್ರಿ ಪಕ್ಷಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಅಂದಹಾಗೆ ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಒಟ್ಟು ಎರಡು ಭಾರೀ ಚುನಾವಣೆಯಲ್ಲಿ ಸೋಲು ಕಂಡಿದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮತ್ತೆ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ.

Leave A Reply

Your email address will not be published.