Government scheme: ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಜಾರಿ: ಇನ್ಮುಂದೆ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
Government scheme: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಹೌದು, ಇನ್ಮುಂದೆ ಗ್ರಾಮೀಣ ಜನರ ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ, ಈ ಯೋಜನೆಯಡಿ (Government scheme) ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.
ಮುಖ್ಯವಾಗಿ ರಕ್ತದೊತ್ತಡ ಸಮಸ್ಯೆ, ಮಧುಮೇಹ, ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ದೆಯಲ್ಲಿ ಉಸಿರುಗಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ ಮುಂತಾದ ಸೇವೆಯನ್ನು ಮನೆಬಾಗಿಲಿಗೆ ಬಂದು ತಪಾಸಣೆ ಮಾಡಲಾಗುತ್ತೆ.
ಈ ಯೋಜನೆ ಅಡಿಯಲ್ಲಿ, ಆರೋಗ್ಯ ಕಾರ್ಯಕರ್ತರ ಒಂದು ತಂಡ ದಿನಕ್ಕೆ 15 ಮನೆಗಳ ತಪಾಸಣೆ ನಡೆಸಲಿದೆ. ಪ್ರತಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಭೇಟಿ ಕಡ್ಡಾಯ ಮಾಡಲಾಗಿದೆ. ಮತ್ತು ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧ ವಿತರಣೆ, ಕೆಲವರಿಗೆ ಜೀವನ ಶೈಲಿ ಮಾರ್ಪಾಡಿಗೆ ಸಲಹೆ ನೀಡಲಾಗುತ್ತೆ. ಒಂದು ವೇಳೆ ಈಗಾಗಲೇ ಆರೈಕೆಯಲ್ಲಿರುವ ರೋಗಿಗಳಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಔಷಧೋಪಚಾರ. ಉಚಿತವಾಗಿ ಮಾತ್ರೆಗಳ ವಿತರಣೆ ಮಾಡಲಾಗುತ್ತೆ.
ಈ ಯೋಜನೆ ಮೂಲಕ ಅಕಾಲಿಕ ಮರಣಗಳನ್ನು ತಡೆಗಟ್ಟಲು, ಸಾಂಕ್ರಾಮಿಕವಲ್ಲದ ರೋಗಗಳ ಚಿಕಿತ್ಸೆಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಪ್ರಯೋಜನ ಆಗಲಿದೆ.
Lois Sasson I very delighted to find this internet site on bing, just what I was searching for as well saved to fav