MUDA Scam: ಮೈಸೂರು ಮೂಡಾ ಭೂಮಿ ಪ್ರಕರಣ; ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ

MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು. ಮೂಡಾ ಪ್ರಕರಣದಲ್ಲಿ ಇವರು ಎರಡನೇ ಆರೋಪಿಯಾಗಿದ್ದು, ಲೋಕಾಯುಕ್ತ ನೀಡಿದ ನೋಟಿಸ್‌ ಹಿನ್ನೆಲೆಯಲ್ಲಿ ವಿಚಾರಣೆಗೆ ಬಂದಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದು, ಮೂರು ಗಂಟೆಗಳ ಹೇಳಿಕೆ ನೀಡಿ ತೆರಳಿದ್ದಾರೆ. ಗೌಪ್ಯವಾಗಿ ಮೈಸೂರು ಲೋಕಾಯುಕ್ತ ಪೊಲೀಸರು ಮಾಹಿತಿ ಸಂಗ್ರಹ ಮಾಡಿರುವುದಾಗಿ ವರದಿಯಾಗಿದ್ದು, ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದಿದೆ.

ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಕರೆಸಿ ಮೈಸೂರು ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದಾರೆ. ಎ1 ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಇನ್ನೂ ಆಗಿಲ್ಲ.

Leave A Reply

Your email address will not be published.