Madikeri: ಟ್ರಾಫಿಕ್‌ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ; ಬಂಟ್ವಾಳ ಮೂಲದ ಚಾಲಕನ ಬಂಧನ

Share the Article

Madikeri: ಬಂಟ್ವಾಳದ ಚಾಲಕನೋರ್ವ ಕರ್ತವ್ಯನಿರತ ಸಂಚಾರಿ ಪೊಲೀಸ್‌ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷ್ಯ ಮಾಡಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಪಟ್ಟಂತೆ ಇದೀಗ ಕೊಡಗು ಪೊಲೀಸರು ಚಾಲಕನನ್ನು ಬಂಧನ ಮಾಡಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಬಂಧಿತ ಆರೋಪಿ. ಈತ ಘಟನೆ ಸಂದರ್ಭದಲ್ಲಿ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಡಿಕ್ಕಿಯಾಗಿತ್ತು. ಇದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬ್ಬಂದಿಯಾದ ಸಂಜು ಅವರು ಡಿಕ್ಕಿ ಮಾಡಿದ ನಝೀರ್‌ ಕಾರನ್ನು ಪಕ್ಕಕ್ಕೆ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದ ನಝೀರ್‌ ಚಾಲಕ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.

ಕಾರು ಚಲಾಯಿಸಿ ಪರಾರಿಯಾಗುವ ಸಂದರ್ಭದಲ್ಲಿ ಸಂಜು ಅವರ ಬಲಗಾಲಿಗೆ ಗಾಯವಾಗಿದೆ. ಈ ಎಲ್ಲಾ ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಡಿಕೇರಿ ಪೊಲೀಸರು ಹಾಗೂ ಸಿಬ್ಬಂದಿಗಳ ತನಿಖಾ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

Leave A Reply

Your email address will not be published.