Heart Attack: ಭಜನಾ ಸ್ಪರ್ಧೆಯಲ್ಲಿ ಕಲಾವಿದನಿಗೆ ಹೃದಯಾಘಾತ; ವೇದಿಕೆಯಲ್ಲೇ ಸಾವು

Share the Article

Heart Attack: ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೋರ್ವರು ಹೃದಯಾಘಾತದಿಂದ ಮೃತಹೊಂದಿದ್ದಾರೆ. ಈ ಘಟನೆ ನಡೆದಿರುವುದು ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.

ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) ಎಂಬುವವರೇ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ.
ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಜನಾ ಸ್ಪರ್ಧೆ ಆಯೋಜನೆ ಮಾಡಿದ್ದು, ತನ್ನ ತಂಡದೊಂದಿಗೆ ಸ್ಪರ್ಧೆ ಮುಗಿಸಿ ವೇದಿಕೆಯಿಂದ ವಾಪಾಸು ಬರುವ ಸಂದರ್ಭದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Leave A Reply