Mysore dynasty: ಮೈಸೂರು ರಾಜಮನೆತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಕಿರುಕುಳ- HD ಕುಮಾರಸ್ವಾಮಿ ಆಕ್ರೋಶ

Mysore dynasty: ಮೈಸೂರು ರಾಜ ಮನೆತನದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ(Congress govt) ದ್ವೇಷ ಸಾಧಿಸುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಮೈಸೂರು(Mysore) ರಾಜಮನೆತನದ ಕುಟುಂಬಕ್ಕೆ ಸಿದ್ದರಾಮಯ್ಯ(CM Siddaramayiah) ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ(Central Minister) ಹೆಚ್.ಡಿ.ಕುಮಾರಸ್ವಾಮಿ(H D Kumaraswami) ಗಂಭೀರ ಆರೋಪ ಮಾಡಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಇಂದು ಚುನಾವಣಾ ಪ್ರಚಾರ ಭಾಷಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡೇಶ್ವರಿ ತಾಯಿ ಮೈಸೂರು ರಾಜರು ತಲತಲಾಂತರದಿಂದ ಪೂಜಿಸುತ್ತಾ ಬಂದಿರುವ ಅರಸು ಮನೆತನದ ಆರಾಧ್ಯ ದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೆಟ್ಟ ಕೆಲಸಕ್ಕೆ ಕೈ ಹಾಕಿದೆ ಈ ಸರ್ಕಾರ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರದು ಮನೆತನದ ಉಸ್ತುವಾರಿಯಲ್ಲಿಯೇ ಇತ್ತು. ಚಾಮುಂಡಿ ದೇವಿಯ ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಬಹಳಷ್ಟು ಕೆಲಸ ಮಾಡಿದೆ. ಹಿಂದಿನಿಂದಲೂ ರಾಜ್ಯದ ಅಭಿವೃದ್ಧಿಗೆ, ನೀರಾವರಿ, ಶಿಕ್ಷಣ, ಕೈಗಾರಿಕಾಭಿವೃದ್ಧಿಗೆ ಮಹಾರಾಜರು ವಿಫುಲ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯಕ್ಕಾಗಿ ಸೇವೆ ಮಾಡಿದ ಈ ಕುಟುಂಬಕ್ಕೆ ಸಿದ್ದರಾಮಯ್ಯ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಕಾಳಜಿಯಿಂದ ನಿರ್ವಹಿಸುತ್ತಿತ್ತು. ತಾಯಿಯ ಸನ್ನಿಧಾನದಲ್ಲಿ ನಡೆಯುವ ಎಲ್ಲಾ ಕಾರ್ಯಗಳನ್ನು ಶ್ರದ್ಧೆಯಿಂದ ನೋಡಿಕೊಳ್ಳುತ್ತಿತ್ತು. ವಂಶಪಾರಂಪರ್ಯವಾಗಿ ಕುಟುಂಬ ನಡೆಸುಕೊಂಡು ಬರುತ್ತಿದ್ದ ದೇವರ ಸೇವೆಯ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದರು. ಇದೇ ವೇಳೆ
ರಾಜ ವಂಶಸ್ಥರು ಹಾಗೂ ಮೈಸೂರು ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯರಾದ ಶ್ರೀ ಯದುವೀರ್ ಒಡೆಯರ್ ಅವರು ಕೂಡ ಉಪಸ್ಥಿತರಿದ್ದರು.

Leave A Reply

Your email address will not be published.