Home National Rajasthan Accident News: ಭೀಕರ ರಸ್ತೆ ಅಪಘಾತ; 12 ಜನರ ದಾರುಣ ಸಾವು

Rajasthan Accident News: ಭೀಕರ ರಸ್ತೆ ಅಪಘಾತ; 12 ಜನರ ದಾರುಣ ಸಾವು

Hindu neighbor gifts plot of land

Hindu neighbour gifts land to Muslim journalist

Rajasthan Accident News: ರಾಜಸ್ಥಾನದಿಂದ ಸಿಕಾರ್‌ನಲ್ಲಿ ಬಸ್‌ವೊಂದು ಮೋರಿಗೆ ಬಿದ್ದ ಪರಿಣಾಮ, ಈ ದುರ್ಘಟನೆಯಲ್ಲಿ ಇದುವರೆಗೆ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಕಾರ್‌ನ ಲಕ್ಷ್ಮಣಗಢ ಪಟ್ಟಣದ ಬಳಿ ಮಂಗಳವಾರ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ತುಂಬಿದ ಖಾಸಗಿ ಬಸ್ ಸುಜನಗಢದಿಂದ ನವಲಗಢಕ್ಕೆ ಹೋಗುತ್ತಿತ್ತು. ಈ ವೇಳೆ ವೇಗವಾಗಿ ಬಂದ ಬಸ್ ದಾರಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರಲ್ಲಿ ರೋದನ ಮುಗಿಲುಮುಟ್ಟಿದೆ. ಮೋರಿಗೆ ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದವರನ್ನು ಹೊರತೆಗೆದು 37 ಮಂದಿ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ಹತ್ತಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಈ ಪೈಕಿ 5 ಮಂದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಆಡಳಿತಾಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಆಸ್ಪತ್ರೆಯಲ್ಲೂ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮೋರಿಗೆ ನುಗ್ಗಿದ ಬಸ್ಸನ್ನು ಪೊಲೀಸರು ಕ್ರೇನ್ ಬಳಸಿ ಹೊರತೆಗೆದಿದ್ದಾರೆ. ಅಲ್ಲದೆ, ಈ ಅಪಘಾತದ ಬಗ್ಗೆ ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ.