Udupi: ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – ಛಿದ್ರ ಛಿದ್ರವಾದ ಮನೆಯ ಗೋಡೆ, ವಸ್ತುಗಳೆಲ್ಲ ಸುಟ್ಟು ಕರಕಲು!!

Share the Article

Udupi: ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ (Gas Cylinder Blast) ಪರಿಣಾಮ ಮನೆಯ ಗೋಡೆಗಳು ಛಿದ್ರ ಛಿದ್ರವಾಗಿ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಉಡುಪಿ (Udupi) ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಮೂರು ಅಂತಸ್ತಿನ ಅಪಾರ್ಟ್ ಮೆಂಟ್‌ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಈ ಅಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸೋಮವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು ಗ್ಯಾಸ್ ಸಿಲಿಂಡ‌ರ್ ಲೀಕೇಜ್ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಸಿಲಿಂಡರ್ ಸ್ಫೋಟದ ಬಳಿಕ ತಕ್ಷಣವೇ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

Leave A Reply