Belthangady : ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು

Belthangady : ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ.

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ(Belthangady ) ಕೊಕ್ಕಡ(Kokkada)ದಲ್ಲಿ ವಿಷ ಸೇವನೆ ಮಾಡಿ BSC ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಮೃತ ಪ್ರಿಯಾಂಕ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ಕಲಿಗೆಯ ವಿದ್ಯಾರ್ಥಿನಿಯಾಗಿದ್ದರು.

ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಇಂದು ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ವಿಷ ಪದಾರ್ಥ ಸೇವಿಸಲು ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ.

Leave A Reply

Your email address will not be published.