Police: ನೀನು ಗಂಡ್ಸೆ ಆಗಿದ್ರೆ ಪೊಲೀಸ್ ಗೆ ಹೊಡಿ ಎಂದು ಅಮ್ಮನ ಸವಾಲು! ಆದ್ರೆ ಮಗ ಮಾಡಿದ್ದೇನು?

Share the Article

Police: ತಾಯಿ ಮಗನ ಜಗಳ ತಾರಕಕ್ಕೆ ಏರಿದ್ದು ಅಲ್ಲದೇ ಪೊಲೀಸ್ ಸ್ಟೇಷನ್ ವರೆಗೆ ತಲುಪಿದೆ. ಹೌದು, ಜಗಳದಲ್ಲಿ ತಾಯಿಯ ಸವಾಲು ಸ್ವೀಕಾರ ಮಾಡಿದ ಮಗ ಪೊಲೀಸ್ ಮೇಲೆಯೇ ಕೈ ಮಾಡಿದ್ದಾನೆ.

ಬಿಇ ಡ್ರಾಪ್ ಔಟ್ ಆಗಿರುವ ಮಧುಸೂದನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು. ಈ ವಿಚಾರವಾಗಿ ತಾಯಿ ಸುಶೀಲಮ್ಮ ಮತ್ತು ಮಧುಸೂದನ್ ನಡುವೆ ಗಲಾಟೆ ನಡೆದಿದೆ. ಬಳಿಕ, ತಾಯಿ ಸುಶೀಲಮ್ಮ ಮಗನ ವಿರುದ್ಧ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದಾರೆ.

ನಂತರ, ಪೊಲೀಸರು ವಿಚಾರಣೆಗೆಂದು ಇಬ್ಬರನ್ನೂ ಠಾಣೆಗೆ ಕರೆಸಿದ್ದಾರೆ. ಪೊಲೀಸ್ ಠಾಣೆಯಲ್ಲೇ ತಾಯಿ ಮತ್ತು ಮಗ ಜಗಳವಾಡಲು ಆರಂಭಿಸಿದ್ದಾರೆ. ಈ ವೇಳೆ ಮಹಿಳಾ ಪಿಎಸ್‌ಐ (Police) ಜಯಂತಿ, ಮಧುಸೂದನ್ ಗೆ ಗದರಿಸಿ ಒಂದೇಟು ಹೊಡೆದಿದ್ದಾರೆ.

ಈ ಸಂದರ್ಭದಲ್ಲಿ ಸುಶೀಲಮ್ಮ, “ದೂರು ಕೊಟ್ಟು ಪೊಲೀಸರಿಂದ ಹೊಡೆಸಿದರೇ, ಪೋಲೀಸರಿಗೆ ತಿರುಗಿ ಹೊಡೆಯುವೆ ಅಂತ ಹೇಳುತ್ತಿದ್ದಿಯಲ್ಲ. ಈಗ ಹೊಡಿ ನೋಡೋಣ. ನೀನು ಗಂಡಸಾಗಿದ್ದರೆ ಪೊಲೀಸರಿಗೆ ಹೊಡೆದು ತೋರಿಸು. ಹೊಡಿ ಈಗ ಪೊಲೀಸರಿಗೆ ನೋಡೋಣ” ಎಂದು ಮಗ ಮಧುಸೂದನ್‌ನನ್ನು ಪ್ರಚೋದಿಸಿದ್ದಾಳೆ. ಪ್ರಚೋದನೆಗೊಂಡ ಮಧುಸೂದನ್ ಮಹಿಳಾ ಪಿಎಸ್‌ಐ ಜಯಂತಿ ಮೇಲೆ ಹಲ್ಲೆ ಮಾಡಿದ್ದಾನೆ. ಇದೀಗ ಈ ಪರಿಣಾಮ ಮಹಿಳಾ ಪಿಎಸ್ ಐ ಜಯಂತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುಸೂದನ್ ವಿರುದ್ಧ ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಮಧುಸೂದನ್‌ನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಕಲಂ-132 ,121(1),121(2),352, 54, 3(5) ಬಿಎನ್‌ಎಸ್‌ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.