Koppala: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ – ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
Koppala: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಹೌದು, ಕೊಪ್ಪಳ(Koppala)ಜಿಲ್ಲೆಯ ಮರಕುಂಬಿ(Marakumbi) ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ.
10 ವರ್ಷಗಳ ಹಿಂದೆ ನಡೆದ ಗ್ರಾಮದ ದಲಿತರ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೊಂದು ಐತಿಹಾಸಿ ತೀರ್ಪು ಎನ್ನಲಾಗಿತ್ತು. ಇಡೀ ಗ್ರಾಮದ ಬಹುತೇಕ ಮನೆಗಳ ಸದಸ್ಯರು ಜೈಲು ಪಾಲಾಗಿದ್ದರು. ಆ ಬಳಿಕ ಅವರೆಲ್ಲಾ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಕುರಿತು ವಿಚಾರಣೆ ನಡೆದಿಸ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.
ಅಷ್ಟಕ್ಕೂ ಅಂದು ಏನಾಗಿತ್ತು?
ಗಂಗಾವತಿ ನಗರದಲ್ಲಿ ಪವರ್ ಸಿನಿಮಾ ನೋಡಲು ಮಂಜುನಾಥ ಎಂಬಾತ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಮರಕುಂಬಿ ನಿವಾಸಿಯಾಗಿದ್ದ ಮಂಜುನಾಥ ಎಂಬಾತನ ಮೇಲೆ ಹಲ್ಲೆಯಾಗಿತ್ತು. ಬಳಿಕ ತಮ್ಮದೇ ಊರಿನ ದಲಿತರು ಹಲ್ಲೆ ಮಾಡಿಸಿದ್ದಾರೆ ಎಂದು ಮಂಜುನಾಥ ಗ್ರಾಮದ ಜನರಿಗೆ ಹೇಳಿದ್ದ. ಬಳಿಕ ಮಂಜುನಾಥನ ಪರವಾಗಿ ಗ್ರಾಮದ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಅನೇಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿ, ಹಲ್ಲೆ ಮಾಡಲಾಗಿತ್ತು. ಈ ಕುರಿತು ಭೀಮೇಶ್ ಎಂಬುವವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.
ಪ್ರಕರಣದಲ್ಲಿನ ಆರೋಪಿಗಳಲ್ಲಿ ಕೆಲವರು ಮೃತಪಟ್ಟಿದ್ದಾರೆ. ಕೆಲವರದ್ದು ಹೆಸರು ಪುನಾರಾರ್ವತನೆಯಾಗಿದೆ. ಹೀಗಾಗಿ, 101 ಆರೋಪಿಗಳ ವಿರುದ್ಧ ಅಪರಾಧ ಸಾಬೀತಾದ ಹಿನ್ನಲೆ ಕೊಪ್ಪಳ ನ್ಯಾಯಾಲಯದಿಂದ ಶಿಕ್ಷೆಯ ಆದೇಶ ಹೊರ ಬಿದ್ದಿತ್ತು. ಕಳೆದ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು. ಇದೀಗ ಕೋರ್ಟು ಎಲ್ಲರಿಗೂ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ11 ಜನ ತೀರ್ಪು ಬರುವ ಪೂರ್ವದಲ್ಲಿಯೇ ಮೃತಪಟ್ಟಿದ್ದಾರೆ.