Mangaluru: ಸಿಬಿಐ ಅಧಿಕಾರಿಗಳ ಹೆಸರಲ್ಲಿ ಲಕ್ಷ ಲಕ್ಷ ವಂಚನೆ! ಕೇರಳ ಯುವಕರು ಮಂಗಳೂರು ಪೊಲೀಸ್ ವಶ!

Share the Article

Mangaluru: ಸಿ ಬಿ ಐ ಅಧಿಕಾರಿಗಳ ಹೆಸರಲ್ಲಿ ಫೋನ್ ಮಾಡಿ, ಮೋಸದಿಂದ ಲಕ್ಷ ಲಕ್ಷ ರೂಪಾಯಿ ಹಣವನ್ನು ದೋಚುತ್ತಿದ್ದ ಮೂವರು ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.

ಸದ್ಯ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬ‌ರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.

ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್‌ನ ಸಾಹಿಲ್ ಕೆ.ಪಿ ಮತ್ತು ಎಂಬವರನ್ನು ನಶಾತ್ ನನ್ನು ಬಂಧಿಸಲಾಗಿದೆ. ಮುಖ್ಯವಾಗಿ ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.

Leave A Reply