APL Card: ರಾಜ್ಯಾದ್ಯಂತ APL ಕಾರ್ಡ್ ಬ್ಯಾನ್?! ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್
APL Card: ಕೆಲವು ದಿನಗಳಿಂದ ರಾಜ್ಯದಲ್ಲಿ APL ಕಾರ್ಡ್ ಬ್ಯಾನ್ ಮಾಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ತೀರ್ಮಾನ ಮಾಡಿದೆ ಎಂಬ ಸುದ್ದಿ ರಾಜ್ಯಾಧ್ಯಂತ ಸುದ್ದಿಯಾಗಿತ್ತು. ಆದರೀಗ ಈ ಕುರಿತು ಆಹಾರ ಇಲಾಖೆ ಸ್ಪಷ್ಟಿಕರಣ ನೀಡಿದೆ.
ಹೌದು, ಎಪಿಎಲ್ ಕಾರ್ಡುಗಳ(APL Card) ರದ್ಧತಿಗೆ ಯಾವುದೇ ಸೂಚನೆ ನೀಡಿಲ್ಲ ಹಾಗೂ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸ್ಪಷ್ಟೀಕರಣ ನೀಡಿದೆ. ಈ ಸಂಬಂಧ ಇಲಾಖೆ ಪತ್ರಿಕಾ ಪ್ತಕಟಣೆ ಹೊರಡಿಸಿದ್ದು, ಮಾಧ್ಯಮಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ.
ಸ್ಪಷ್ಟೀಕರಣ
ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ.
ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ… pic.twitter.com/TXcZSyBMc8
— DIPR Karnataka (@KarnatakaVarthe) November 16, 2024
ಅಲ್ಲದೆ ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ ಎಂದು ಹೇಳಿದೆ.