Arecanut: ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್! ಅಡಿಕೆ ಬೆಳೆ ನಿಯಂತ್ರಣಕ್ಕೆ WHO ಶಿಪಾರಸ್ಸು!

Arecanut: ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ (Arecanut) ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ದೊರಕಿದೆ. ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ)ಯ ಅಂಗಸಂಸ್ಥೆಯೊಂದು ಇತ್ತೀಚೆಗೆ ವರದಿ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ಒ) ಅಂಗಸಂಸ್ಥೆ ಇಂಟ‌ರ್ ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆ್ಯಂಡ್ 2024 ಅ. 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಮತ್ತೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ ದಿ ಲ್ಯಾನೆಟ್‌ ಅಂಕಾಲಜಿ ಎಂಬ ಅಂತಾರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಐಎಆರ್‌ಸಿ ಸಂಸ್ಥೆ ಬಾಯಿ ಕ್ಯಾನ್ಸರ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ಪ್ರತಿ ಐದು ವರ್ಷಕ್ಕೊಮ್ಮೆ ವಿಶ್ವ ಕ್ಯಾನ್ಸ‌ರ್ ವರದಿ ಪ್ರಕಟಿಸುತ್ತದೆ. ಈ ಹಿಂದಿನ ಐಎಆರ್‌ಸಿಯ ವರದಿಗಳಲ್ಲೂ ಅಡಕೆ ಕ್ಯಾನ್ಸರ್‌ಕಾರಕ ಎಂದೇ ಉಲ್ಲೇಖವಾಗಿದ್ದರೂ ಈಗಿನ ವರದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.

ಇನ್ನು ಐಎಆರ್‌ಸಿ ವರದಿಯಲ್ಲಿ ತಂಬಾಕು ಮಿಶ್ರಿತ ಅಡಕೆ ಮಾತ್ರವಲ್ಲ, ನೇರವಾಗಿ ಅಡಕೆ ಬೆಳೆಯನ್ನೇ ನಿಯಂತ್ರಿಸುವ ಪ್ರಸ್ತಾಪವಿದೆ. ಹೊಗೆ ರಹಿತ ತಂಬಾಕು ಮತ್ತು ಅಡಕೆ ಬಳಕೆಗೆ ಕಡಿವಾಣ ಹಾಕುವ ಮೂಲಕ ವಿಶ್ವದ ಮೂರನೇ ಒಂದರಷ್ಟು ಬಾಯಿ ಕ್ಯಾನ್ಸ‌ರ್ ತಡೆಯಬಹುದು ಎಂಬ ವರದಿಯಲ್ಲಿ ಹೇಳಲಾಗಿದೆ.

ಜಾಗತಿಕವಾಗಿ ಹೊಗೆರಹಿತ ತಂಬಾಕಿನಿಂದ ಉಂಟಾಗಿರುವ 1,20,200 ಪ್ರಕರಣಗಳಲ್ಲಿ 83,400 ಪ್ರಕರಣ ಭಾರತದಲ್ಲೇ ದಾಖಲಾಗಿದೆ. 2022ರಲ್ಲಿ ಈ ಅಧ್ಯಯನ ನಡೆಸಿದ್ದು, ಬಹುತೇಕ ಅಧ್ಯಯನ ಉತ್ತರ ಭಾರತದಲ್ಲೇ ನಡೆದಿರುವುದು ಗಮನಾರ್ಹ. ಇನ್ನು ಜಾಗತಿಕವಾಗಿ 300 ಮಿಲಿಯನ್ ಮಂದಿ ಹೊಗೆರಹಿತ ತಂಬಾಕು ದಾಸರಾಗಿದ್ದು. 600 ಮಿಲಿಯನ್ ಮಂದಿ ಅಡಕೆ ಬಳಸುತ್ತಾರೆ. ದಕ್ಷಿಣಮಧ್ಯ ಏಷ್ಯಾ. ಆಗ್ನೆಯ ಏಷ್ಯಾ ಮತ್ತು ಇತರೆ ಹೆಚ್ಚಿನ ದೇಶಗಳಲ್ಲಿ ಅಡಕೆ ಬಳಕೆಯಲ್ಲಿದೆ. ಹೊಗೆ ರಹಿತ ತಂಬಾಕು ಮತ್ತು ಅಡಕೆ ಉತ್ಪನ್ನಗಳು ಗ್ರಾಹಕರಿಗೆ ವಿವಿಧ ದಲ್ಲಿ ಲಭ್ಯವಿರುತ್ತವೆ.

ಆದ್ದರಿಂದ ತಂಬಾಕು, ಗುಟ್ಕಾ ಹಾಗೂ ಅಡಕೆಯಂಥ ಹೊಗೆರಹಿತ ತಂಬಾಕು ಉತ್ಪನ್ನಗಳ ಹೆಚ್ಚಿನ ಬಳಕೆಯಿಂದ ಏಷ್ಯಾದ ದೇಶಗಳಲ್ಲಿ ಭಾರತ ಅತೀ ಹೆಚ್ಚು ಬಾಯಿ ಕ್ಯಾನ್ಸ‌ರ್ ಪ್ರಕರಣ ಹೊಂದಿದೆ ಎಂದು ಕ್ಯಾನ್ಸರ್ ವಿಭಾಗದ ವಿಜ್ಞಾನಿ ಡಾ. ಹ್ಯಾರಿಯೆಟ್ ರುಮೇ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಅದಲ್ಲದೆ ಅಡಕೆ ಕ್ಯಾನ್ಸರ್‌ಕಾರಕ ಎಂಬ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕೆಲ ವರ್ಷಗಳಿಂದ ವಿಚಾರಣೆ ನಡೆಯುತ್ತಲೇ ಇದೆ. 1998 ರಿಂದಲೂ ಅಂತಾರಾಷ್ಟ್ರೀಯ ಸಂಶೋಧನಾ ಪತ್ರಿಕೆಗಳಲ್ಲಿ ಅಡಕೆ ಹಾನಿಕಾರಕ ಎಂದೇ ಉಲ್ಲೇಖಿಸಲಾಗುತ್ತಿದೆ. ಅಡಕೆ ಆರೋಗ್ಯದಾಯಕ, ಸಾಂಪ್ರದಾಯಿಕವಾಗಿಯೂ ಅಡಕೆ ಬಳಸುತ್ತಾರೆ. ಮೌಲ್ಯವರ್ಧಿತ ಉತ್ಪನ್ನವಾಗಿಯೂ ಉಪಯೋಗಿಸುತ್ತಾರೆ ಎಂಬುದನ್ನು ಆಧಾರ ಸಹಿತ ಸಾಬೀತುಪಡಿಸಲಾಗಿದೆ.

ಒಟ್ಟಿನಲ್ಲಿ ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಶಿಫಾರಸು ಈ ವರದಿಯು ಮಾಡಿರುವ ಹಿನ್ನೆಲೆಯಲ್ಲಿ ಇದೀಗ ತಂಬಾಕು ಮಾದರಿಯಲ್ಲೇ ಅಡಕೆ ಬೆಳೆ ನಿಯಂತ್ರಣ ಉಪಕ್ರಮಗಳಿಗೂ ಕಾರಣವಾಗುವ ಆತಂಕ ಬೆಳೆಗಾರರಲ್ಲಿ ಮೂಡಿದೆ.

Leave A Reply

Your email address will not be published.