U T Khadar: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು ಪ್ರಕರಣ – ಸ್ಪೀಕರ್ ಯು.ಟಿ ಖಾದರ್ ಹೇಳಿದ್ದೇನು?
U T Khadar: ಮಂಗಳೂರಿನ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಕರಾವಳಿಯಾದ್ಯಂತ ಜನರ ಮನಸ್ಸನ್ನು ಕದಡಿದೆ. ಇದೀಗ ಈ ಸಂಬಂಧ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್(U T Khadar) ಅವರು ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿಕೊಂಡಿರುವ ಅವರು ‘ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ ಎಂದು ಸ್ಪೀಕರ್ ತಿಳಿಸಿದ್ದಾರೆ.
ಅಲ್ಲದೆ ಮೃತರನ್ನು ಮೈಸೂರು ವಿಜಯ ನಗರದ ದೇವರಾಜ್ ಮೊಹಲ್ಲಾ ನಿವಾಸಿ ನವೀನ್ ಕುಮಾರ್ ಎಂಬವರ ಪುತ್ರಿ ಕೀರ್ತನಾ ಎನ್. (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಎಂಬವರ ಪುತ್ರಿ ನಿಶಿತಾ ಎಂ.ಡಿ.(21) ಹಾಗೂ ಮೈಸೂರು ಕೆ.ಆರ್.ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್.ಶ್ರೀನಿವಾಸ್ ಎಂಬವರ ಪುತ್ರಿ ಪಾರ್ವತಿ ಎಸ್.(20) ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬ ವರ್ಗದವರಿಗೆ ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸ್ಪೀಕರ್ ಯು.ಟಿ. ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.