Udupi: ಉಡುಪಿಯಲ್ಲಿ ನಕ್ಸಲ್ ಎನ್ಕೌಂಟರ್; ಎಎನ್‌ಎಫ್ ಗುಂಡಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

Udupi: ಉಡುಪಿ (Udupi) ಹೆಬ್ರಿಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯದಲ್ಲಿ ಎಎನ್‌ಎಫ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ಮುಖಂಡ ವಿಕ್ರಂ ಗೌಡ ನ.18 ಸೋಮವಾರ ರಾತ್ರಿ ಹತನಾಗಿದ್ದಾನೆ.

ಮಾಹಿತಿ ಪ್ರಕಾರ, ಕಬ್ಬಿನಾಲೆ ಗ್ರಾಮದ ಪೀತ ಬೈಲು ಎಂಬಲ್ಲಿ ಸೋಮವಾರ ರಾತ್ರಿ ನಕ್ಸಲ್ ಕೂಂಬಿಂಗ್ ಕಾರ್ಯಾಚರಣೆ ನಡೆದಿತ್ತು. ಈ ವೇಳೆ, ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್ಕೌಂಟರ್ ಆಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿ ಮನೆಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ನಕ್ಸಲ್ ವಿರೋಧಿ ಕೂಂಬಿಂಗ್ ಕಾರ್ಯ ಚುರುಕುಗೊಳಿಸಲಾಗಿತ್ತು. ಅಂತೆಯೇ ನಿನ್ನೆ ರಾತ್ರಿ ಕಬ್ಬಿನಾಲೆ ಗ್ರಾಮಕ್ಕೆ ದಿನಸಿ ಸಾಮಗ್ರಿ ಪಡೆಯಲು ಐವರಿದ್ದ ನಕ್ಸಲರು ಎಂಟ್ರಿ ಕೊಟ್ಟಿದ್ದರು ಎನ್ನಲಾಗಿದೆ. ಇದೇ ವೇಳೆ, ಗುಂಡಿನ ಚಕಮಕಿ ನಡೆದಿದ್ದು ವಿಕ್ರಂ ಗೌಡ ಬಲಿಯಾಗಿದ್ದರೆ ಇತರ ನಾಲ್ವರು ಪರಾರಿಯಾಗಿದ್ದಾರೆ.

ವಿಕ್ರಂ ಗೌಡ ಕಳೆದ 10 ವರ್ಷಗಳಲ್ಲಿ ಪಶ್ಚಿಮ ಘಟ್ಟದ ನಕ್ಸಲರಿಗೆ ಮುಖಂಡನಾಗಿದ್ದ. 2012 ರಲ್ಲಿ ಕರ್ನಾಟಕ ಭಾಗದಲ್ಲಿ ನಕ್ಸಲ್ ಕಾರ್ಯಾಚರಣೆ ತೀವ್ರಗೊಂಡ ಬಳಿಕ ಕೇರಳದತ್ತ ಪರಾರಿಯಾಗಿದ್ದರು. ನಂತರ ಕಳೆದ ವರ್ಷ ವಯನಾಡು ಸೇರಿದಂತೆ ಕೇರಳದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು. ಆನಂತರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ನಕ್ಸಲರು ಕಾಣಿಸಿದ್ದರು.

Leave A Reply

Your email address will not be published.