Tirupati: ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ದಿನವಿಡೀ ಕಾಯಬೇಕಿಲ್ಲ!

Tirupati: ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ (Tirupati) ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೌದು, ತಿರುಪತಿ ದೇವಸ್ಥಾನದಲ್ಲಿ ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳ ಒಳಗಡೆ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. 

 

ಮೊದಲೆಲ್ಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲು 20 ರಿಂದ 30 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಏಕೆಂದರೆ ಪ್ರತಿದಿನ 1ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ. ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ವ್ಯವಸ್ಥೆಯಲ್ಲಿ ಭಕ್ತರಿಗೆ ಕೇವಲ 2 ಗಂಟೆಯಲ್ಲಿ ವೆಂಕಟೇಶ್ವರನ ದರ್ಶನ ನೀಡಲಾಗುವುದು.

 

ಇನ್ನು ಸೆಪ್ಟೆಂಬರ್ ನಲ್ಲಿ ತಿರುಪತಿಯ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪದ ಪ್ರಕರಣ ಬೆಳಕಿಗೆ ಬಂದಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದಾದ ನಂತರ ಟಿಟಿಡಿ ಪ್ರಸಾದದ ವ್ಯವಸ್ಥೆಯನ್ನು ಬದಲಾಯಿಸಿತು. ಅದರ ನಂತರ, ಮಂಡಳಿಯ ಮೊದಲ ಸಭೆ ನಡೆಯಿತು, ಅಂತೆಯೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

 

 

Leave A Reply

Your email address will not be published.