Nelamangala: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಸೋದರ ಮಾವ!
Nelamangala: ಸೋದರ
ಮಾವನಿಂದಲೇ 16 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಇದೀಗ ಆಕೆ ಗರ್ಭಿಣಿಯಾದ ನಂತರ ಈ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿದೆ.
ಹೌದು, ನೆಲಮಂಗಲ (Nelamangala) ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದೀಗ ನೆಲಮಂಗಲ ಪೊಲೀಸರಿಂದ 30 ವರ್ಷದ ಸೋದರ ಮಾವನನ್ನು ಬಂಧಿಸಲಾಗಿದೆ. ಬಾಲಕಿ ತಾಯಿ ದೂರಿನ ಆಧಾರದ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಬಿಎನ್‌ಎಸ್ ಜೊತೆಗೆ ಪೋಕ್ಸ್ ಪ್ರಕರಣ ದಾಖಲಿಸಲಾಗಿದೆ.
ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದು, ಸಮಯಕ್ಕೆ ಸರಿಯಾಗಿ ಮುಟ್ಟು ಆಗುತ್ತಿರಲಿಲ್ಲ. ಹೀಗಾಗಿ ಮಗಳನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ತಪಾಸಣೆ ಮಾಡಿಸಿದಾಗ ಮಗಳು ಗರ್ಭಿಣಿಯಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.
ವಿಷಯ ತಿಳಿದ ಬಾಲಕಿಯ ತಾಯಿಗೆ ಅಘಾತವಾಗಿದೆ. ಅಲ್ಲದೇ ಸೆಪ್ಟೆಂಬರ್‌ನಲ್ಲಿ ಆರೋಪಿ ಸೋದರ ಮಾವ ಮನೆಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ಮತ್ತು ತಾಯಿ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.