BPL Card: ನಿಮ್ಮ `BPL’ ಕಾರ್ಡ್ ಕ್ಯಾನ್ಸಲ್ ಆಗಿದ್ರೆ ಜಸ್ಟ್ ಈ ರೀತಿ ಮಾಡಿ: ಒಂದೇ ವಾರದಲ್ಲಿ ಕಾರ್ಡ್ ವಾಪಾಸ್!
BPL Card: ರಾಜ್ಯದಲ್ಲಿ ಸದ್ದಿಲ್ಲದೇ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗುತ್ತಿದ್ದೂ, ಇದರಿಂದ ಬಡವರಿಗೆ ಬಹಳ ತೊಂದರೆ ಆಗುತ್ತಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ (BPL Card) ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ನಿಮ್ಮ ಕಾರ್ಡ್ ವಾಪಾಸ್ ಸಿಗಲಿದೆ.
ಹೌದು, ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ಕಾರಣ ಇಲ್ಲದೇ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.