G T Devegowda : ಜೆಡಿಎಸ್ ಧುರೀಣ, ಪ್ರಬಲ ನಾಯಕ ಜಿ ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ? ಇಲ್ಲಿದೆ ನೋಡಿ ಬಿಗ್ ಅಪ್ಡೇಟ್

G T Devegowda : ರಾಜ್ಯದ ಮೂರು ಉಪಚುನಾವಣೆಗಳ ಮುಂಚಿತವಾಗಿ ಜೆಡಿಎಸ್ ತುರುವಿನ ಹಿರಿಯ ಶಾಸಕರಾದ ಜಿ ಟಿ ದೇವೇಗೌಡ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅದು ಕೂಡ ದಸರಾ ಉದ್ಘಾಟನೆ ವೇದಿಕೆಯಲ್ಲಿ. ಈ ಬಳಿಕ ಟಿಕೆಟ್ ಹಂಚಿಕೆ ವಿಚಾರದಲ್ಲಿ ನಾಯಕರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂದೆಲ್ಲ ಬಿಂಬಿಸಲಾಗಿತ್ತು. ಇದು ಈಗ ಸತ್ಯವಾಗಿದೆ. ಈ ಕುರಿತು ಸ್ವತಹ ಜಿ ಟಿ ದೇವೇಗೌಡರೇ(G T Devegowda )ಮಾತನಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಅವರು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಹೌದು, ತಮ್ಮ ಜನ್ಮದಿನ ಆಚರಿಸಿಕೊಂಡ ಬಳಿಕ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್, ನಿಖಿಲ್ ಯಾರಿಗಾದರೂ ಟಿಕೆಟ್ ಕೊಡಿ. ಆದರೆ ಯೋಗೇಶ್ವರ್‌ನ ಜೊತೆಯಲ್ಲೇ ಇಟ್ಟುಕೊಳ್ಳಿ ಎಂದಿದ್ದೆ. ನನ್ನ ಮಾತನ್ನು ಕುಮಾರಸ್ವಾಮಿ ಕೇಳಲಿಲ್ಲ. ಸಿ.ಪಿ.ಯೋಗೇಶ್ವರ್ ಅವರನ್ನು ಒಗ್ಗೂಡಿಸಿದ್ದು ನಾನು. ಕೊನೆಗೆ ಅವರೇ ಸಂಸತ್ ಚುನಾವಣೆಯಲ್ಲಿ ಒಂದಾಗಿದ್ದರು. ಬಳಿಕ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ಗೊಂದಲಕ್ಕೆ ಒಳಗಾದರುm
ಚನ್ನಪಟ್ಟಣ ಸೋಲುವ ಕ್ಷೇತ್ರವಲ್ಲ. ನನಗೆ ಕುಮಾರಸ್ವಾಮಿ ಮೇಲೆ ಮುನಿಸಿರುವುದು ಸತ್ಯ ಎಂದು ಹೇಳಿದ್ದಾರೆ.
ಅಲ್ಲದೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದವರು ‘ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಕುರಿತು ಕ್ಷೇತ್ರದ ಜನ ನಿರ್ಧಾರ ಮಾಡುತ್ತಾರೆ. ಕಳೆದ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿತ್ತು. ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್ ಮಂತ್ರಿ ಮಾಡುವುದಾಗಿ ಹೇಳಿದ್ದರು. ಖುದ್ದು ರಾಹುಲ್ ಗಾಂಧಿ ಮನೆಗೆ ಬರಲು ತಯಾರಿ ಮಾಡಿಕೊಂಡಿದ್ದರು. ಆದರೆ ತಂದೆ ಸ್ಥಾನದಲ್ಲಿರುವ ದೇವೇಗೌಡರ ಮಾತಿಗೆ ಮಣಿದು ಪಕ್ಷದಲ್ಲಿಯೇ ಉಳಿದೆ. ಮುಂದಿನ ಮೂರು ವರ್ಷ ಜೆಡಿಎಸ್ ಪಕ್ಷದಲ್ಲಿ ಇರ್ತೀನಿ. ಮುಂದೆ ಕಾಂಗ್ರೆಸ್ ಸೇರಬೇಕೋ ಬೇಡವೋ ಜನ ತೀರ್ಮಾನ ಮಾಡುತ್ತಾರೆ ಎಂದರು.