KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ? ಇವರೇ ನೋಡಿ ಕಾಂಗ್ರೆಸ್ ಹೊಸ ಸಾರಥಿ
KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್(DK Shivkumar) ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಮುನ್ನಲೆಗೆ ಬಂದಿದೆ. ಈ ವಿಚಾರ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಅಂತೆಯೇ ಇದೀಗ ಮತ್ತೆ ಇದು ಮುನ್ನಲೆಗೆ ಬಂದು ಹೊಸ ಅಧ್ಯಕ್ಷರು ಯಾರಾಗುತ್ತಾರೆ ಎಂಬ ಚರ್ಚೆಯನ್ನು ಹುಟ್ಟಾಕಿದೆ. ಹಾಗಿದ್ರೆ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವುದು ನಿಜವೋ? ಒಂದು ವೇಳೆ ಅವರು ರಾಜೀನಾಮೆ ನೀಡಿದರೆ ಮುಂದಿನ ಕಾಂಗ್ರೆಸ್ ಅಧ್ಯಕ್ಷರು ಯಾರಾಗುತ್ತಾರೆ? ಇಲ್ಲಿದೆ ನೋಡಿ ಡೀಟೇಲ್ಸ್
ಕರ್ನಾಟಕದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅದ್ಭುತವಾದ ಸಾಧನೆ ಮಾಡಿದೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ಕೊಡಲಿದ್ದಾರೆ ಎನ್ನುವ ವಿಚಾರ ಜೋರಾಗಿ ಚರ್ಚೆಯಾಗುತ್ತಿದೆ. ಎಲ್ಲವೂ ಅಂದಕೊಂಡಂತೆ ಆದರೆ, ಮುಂದಿನ ವರ್ಷ ಸಂಕ್ರಾಂತಿಯ ಒಳಗಾಗಿ, ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಉಪ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್ ಅವರು ಉಳಿಸಿಕೊಳ್ಳುವ ಸಾಧ್ಯತೆ ಇದೆ.
ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮುಂದೆ ಕಾಂಗ್ರೆಸ್ನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಇದೀಗ ಸಚಿವರಾದ ಈಶ್ವರ್ ಖಂಡ್ರೆ ಅಥವಾ ಸತೀಶ್ ಜಾರಕಿಹೊಳಿ ಅವರ ಹೆಸರು ಈ ವಿಷಯದಲ್ಲಿ ಟ್ರೆಂಡಿಂಗ್ನಲ್ಲಿ ಇದೆ. ಇನ್ನು ಈ ಬಗ್ಗೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ(Satish Jarakiholi)ಅವರು, ಕಾಂಗ್ರೆಸ್ ಹೈಕಮಾಂಡ್ ಮುಂದೆ ಸದ್ಯಕ್ಕೆ ಈ ವಿಚಾರ ಇಲ್ಲ. ಮುಂದಿನ ದಿನಗಳಲ್ಲಿ ಈ ರೀತಿ ನಿರ್ಧಾರ ತೆಗೆದುಕೊಂಡರೆ ನೋಡೋಣ ಎಂದಷ್ಟೇ ಹೇಳಿದ್ದಾರೆ.