Ramanagara: ರಾಜ್ಯದಲ್ಲೊಂದು ಭಯಾನಕ ಘಟನೆ – 2 ದಿನದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.!

Ramanagara: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಆಗ ತಾನೇ ಹುಟ್ಟಿದ ಎರಡು ದಿನದ ಹಸು ಗೂಸನ್ನು ಹೆತ್ತ ತಾಯಿಯೇ ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

ಈ ಘಟನೆ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಗಂಡು ಮಗುವಿನ ಶವ ಪತ್ತೆಯಾಗಿದೆ. ಹೆತ್ತ ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಇದೀಗ ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು? ಈ ಕೃತ್ಯ ಎಸಗಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ಟಾಯ್ಲೆಟ್ ನ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳು ಶಾಕ್ ಆಗಿದ್ದಾರೆ.

Leave A Reply

Your email address will not be published.