Delhi : ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ನಿಗೂಢ ಲಿಕ್ವಿಡ್ ಎಸೆತ!! ವಿಡಿಯೋ ವೈರಲ್

Delhi : ದೆಹಲಿಯಲ್ಲಿ(Delhi)ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ (Liquid) ಎರಚಿರುವ ಘಟನೆ ನಡೆದಿದೆ.

ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಶನಿವಾರ ನಡೆದ ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಜ್ರಿವಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿ ಹಿಂದೆ ನಿಂತಿರುವ ಜನರತ್ತ ಕೈಬೀಸುತ್ತಿದ್ದ ವೇಳೆ ಅವರ ಬಳಿಗೆ ಬಂದ ವ್ಯಕ್ತಿಯೊಬ್ಬ ಮಾಜಿ ಸಿಎಂ ಮೇಲೆ ದ್ರವ ಎರಚಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ತಡೆದರು. ನಂತರ ಕೇಜ್ರಿವಾಲ್ ಮತ್ತು ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದೇ ಪ್ರದೇಶದ ನಿವಾಸಿಯಾಗಿರುವ ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ದೃಶ್ಯಾವಳಿ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿ, ‘ಮಾಜಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಇನ್ನು ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದೆ.

Leave A Reply

Your email address will not be published.