Bengaluru : ಫೆಂಗಲ್ ಚಂಡಮಾರುತ ಎಫೆಕ್ಟ್, ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆಯೋ ? ಇಲ್ವೋ ?
Bengaluru : ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗಿದೆ. ಕೋಲಾರ ಜಿಲ್ಲೆಯ(Kolara) ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ, ಆದರೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆ ಎಂಬುವಂತದ್ದು ರಾಜಧಾನಿಯ ಜನರ ಪ್ರಶ್ನೆಯಾಗಿದೆ.
ಹೌದು, ಬೆಂಗಳೂರು(Bengaluru) ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಹೀಗಾಗಿ ಪೋಷಕರು, ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸಬೇಕು. ನಾಳೆ ಎಂದಿನಂತೆಯೇ ಶಾಲಾ ಕಾಲೇಜುಗಳು ನಡೆಯಲಿವೆ, ರಜೆ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.