Britain : ಬ್ರಿಟನ್ ಸಂಸತ್ತಲ್ಲಿ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳು!! ಕಾರಣವೇನು?

Britain : ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳು(Congress Gurentees)ಇದೀಗ ಬ್ರಿಟನ್ ಸಂಸತ್‌ನಲ್ಲಿ ಸದ್ದು ಮಾಡಿವೆ.

 

ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯ ಹೂಡಿಕೆ ಭಾಷಣಕಾರರಾಗಿ ಮಾತನಾಡಿದರು. ಈ ವೇಳೆ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಬ್ರಿಟನ್ ಸಂಸತ್ತಿನಲ್ಲಿ ಕೂಡ ಸದ್ದು ಮಾಡಿದಂತಾಗಿದೆ.

ಈ ಕುರಿತು ಮಾತನಾಡಿದ ಅವರು ಕರ್ನಾಟಕ ಸರ್ಕಾರದ(Karnataka Government )ಪಂಚ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಗಮನ ಸೆಳೆದ ಸಚಿವ ಸಂತೋಷ್ ಲಾಡ್(Santosh Lad)ಅವರು, ಗ್ಯಾರಂಟಿ ಕಾರ್ಯಕ್ರಮಗಳು ನಮ್ಮ ದೇಶದ ಇತರ ರಾಜ್ಯಗಳು ಮಾತ್ರವಲ್ಲದೆ, ವಿಶ್ವದ ಹಲವು ದೇಶಗಳಿಗೂ ಕೂಡ ಮಾದರಿಯಾಗಿವೆ. ಇದೊಂದು ಅಭೂತಪೂರ್ವವಾದ ಕಾರ್ಯಕ್ರಮ. ಈ ಕಾರ್ಯಕ್ರಮಗಳಿಗೆ ಪ್ರತಿ ವರ್ಷ 12 ಬಿಲಿಯನ್ ಡಾಲರ್ ಅನ್ನು ಖರ್ಚು ಮಾಡಲಾಗುತ್ತಿದೆ. ಬಡ ಜನರಿಗೆ ಸಾಮಾಜಿಕ ಸೇವಾ ಯೋಜನೆಗಳನ್ನು ನೀಡಲಾಗುತ್ತಿದೆ. ಇದರಿಂದ ನಮ್ಮ ಕರ್ನಾಟಕ ರಾಜ್ಯದ ಜಿಡಿಪಿ ಸಹ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಇಂತಹ ಯೋಜನೆಯನ್ನು ಜಾರಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಎಂದು ಹೇಳಿದರು.

ಅಲ್ಲದೆ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು ಉದ್ಯಮವನ್ನು ವಿಸ್ತರಣೆ ಮಾಡಲು ಸಾಕಷ್ಟು ವಿಫುಲ ರೀತಿಯಲ್ಲಿ ನಮ್ಮ ರಾಜ್ಯ ಸರ್ಕಾರ ಹೂಡಿಕೆದಾರರಿಗೆ ನೆರವು ಒದಗಿಸಲಿದೆ. ಕೃಷಿ, ಉದ್ದಿಮೆ ಹೀಗೆ ಹಲವು ರಂಗದಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆ ಮಾಡಬಹುದು. ಕರ್ನಾಟಕದ ಜಿಡಿಪಿ ಭಾರತದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

Leave A Reply

Your email address will not be published.