Siddaramaiah: ಇನ್ಮುಂದೆ ಇವರಿಗೆ ಅನ್ನಭಾಗ್ಯವಿಲ್ಲ… ಸಿಎಂ ಸಿದ್ದರಾಮಯ್ಯ ಶಾಕಿಂಗ್ ಸ್ಟೇಟ್ಮೆಂಟ್

Siddaramaiah: ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ಅದರಲ್ಲೂ ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೆ ಒತ್ತಿ ಹೇಳಿದ್ದಾರೆ.

ಹೌದು, ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದು, ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ಮೊದಲ ಸ್ಥಾನದಲ್ಲಿದ್ದೇವೆ. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ ಎಂದಿದ್ದಾರೆ.
ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗದಿ ಮಾಡುವಂತಾಗಬೇಕು. ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗಳಿಗೆ ಅವರೇ ಬೆಲೆ ನಿಗದಿ ಮಾಡುತ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು ಎಂದು ಸಿಎಂ ಆಶಿಸಿದ್ದಾರೆ.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ, ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇನ್ನು ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯ. ಈ ಕಾರಣಕ್ಕೆ ನಾವು ಅನ್ನಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

Leave A Reply

Your email address will not be published.