Shivakumara Swamiji: ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ಹಾನಿಗೊಳಿಸಿದ್ದ ಆರೋಪಿ ಬಂಧನ

Shivakumara Swamiji: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ (Shivakumara Shivakumara Swamiji) ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ವಿಚಾರ ವರದಿ ಆಗಿದೆ.

ಮಾಹಿತಿ ಪ್ರಕಾರ, ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಈತ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ. ಪೊಲೀಸರು ಈ ಕೃತ್ಯ ದ ಹಿಂದಿನ ಕಾರಣ ಏನೆಂದು ಕೇಳಿದಾಗ ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಇನ್ನು 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ ಎನ್ನಲಾಗಿದೆ.
ಈತ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ. ಅಂತೆಯೇ ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಇದರ ಜೊತೆಗೆ ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಸಿಗುವಂತೆ ಭಿತ್ತಿಪತ್ರ ಹಂಚುತ್ತಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.