Belthangady : ಅನಾರೋಗ್ಯದಿಂದ ಮಹಿಳೆ ಸಾವು !!
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದ ನಿವಾಸಿ ವಸಂತಿ ಅನಾರೋಗ್ಯದಿಂದ ಮೃತರಾಗಿದ್ದಾರೆ.
ಹೌದು, ಬೆಳ್ತಂಗಡಿ(Belthangady)ತಾಲೂಕಿನ ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಅವರು ಡಿ. 6ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ವಸಂತಿ ಅವರು ಮುಂಬಯಿಯಲ್ಲಿ ಉದ್ಯೋಗದಲ್ಲಿರುವ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.