Subramanya: ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಡೊನಾಲ್ಡ್ ಟ್ರಂಪ್ ಆಪ್ತ ಶಶಿಭೂಷಣ್
Subramanya: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯವಹಾರ ಪಾಲುದಾರ, ಹೈದರಾಬಾದ್ ಮೂಲದ ಶಶಿಭೂಷಣ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ.
ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ ʼಎʼ ಪ್ಯಾಕ್ ಅನ್ನು ಶಶಿಭೂಷಣೆ ಮುನ್ನೆಡೆಸಿದ್ದರು. ಎ ಪ್ಯಾಕ್ ಟ್ರಂಪ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಕೇತ್ರಕ್ಕೆ ಬಂದು ಪುಳಕಿತಳಾಗಿದ್ದೇನೆ ಎಂದು ಶಶಿಭೂಷಣ್ ಪ್ರತಿಕ್ರಿಯೆ ನೀಡಿದ್ದಾರೆ.
ಅಂದ ಹಾಗೆ ಶಶಿಭೂಷಣ್ ಅವರು ಅಮೆರಿಕದಲ್ಲಿ 500 ಎಕರೆ ಜಾಗದಲ್ಲಿ 3000ಕೋಟಿ ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನವನ್ನು ಕಟ್ಟಿಸುತ್ತಿದ್ದಾರೆ.