Home News ಉಡುಪಿ Murudeshwraa: ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು- ಓರ್ವ ವಿದ್ಯಾರ್ಥಿನಿ ಸಾವು, ಮೂವರು...

Murudeshwraa: ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು- ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ!

Hindu neighbor gifts plot of land

Hindu neighbour gifts land to Muslim journalist

Murudeshwara: ಇದು ರಾಜ್ಯದ್ಯಂತ ಶಾಲಾ ಮಕ್ಕಳು ಪ್ರವಾಸ ಹೋಗುವಂತ ಸಮಯ. ಅಂತೆಯೇ ಮಕ್ಕಳು, ಶಿಕ್ಷಕರು ಸಂತೋಷದಿಂದ ರಾಜ್ಯದ ನಾನಾ ಭಾಗಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಈ ಸಂತೋಷದ ಸಮಯದಲ್ಲೇ ರಾಜ್ಯದಲ್ಲೊಂದು ದುರಂತ ಸಂಭವಿಸಿದೆ. ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ(Murudeshwara) ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.

 

ಹೌದು, ಕೋಲಾರದ(Kolara) ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್​ನಲ್ಲಿ ಇಂದು ಸಂಜೆ ಮುರ್ಡೇಶ್ವರ ಬೀಚ್​ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

 

ಅಂದಹಾಗೆ ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಅಲ್ಲದೆ ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

 

ಇನ್ನು ಕಳೆದ ಎರಡು ತಿಂಗಳಿನಿಂದ ಲೈಫ್ ಗಾರ್ಡ್‌ಗಳಿಗೆ ಪ್ರವಾಸೋದ್ಯಮ ಇಲಾಖೆ ಸಲಕರಣೆ ಪೂರೈಸಿಲ್ಲ. ಲೈಫ್ ಗಾರ್ಡ್ಸ್ ಮಕ್ಕಳನ್ನು ರಕ್ಷಿಸಲಾಗದ ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಸುದ್ದಿ ಮಾಡಿದ್ರೂ ಪ್ರವಾಸೋದ್ಯಮ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತಕೊಂಡಿಲ್ಲ. ಇಂತಹ ದುರ್ಘಟನೆಗಳು ನಡೆಯುತ್ತಿದ್ರೂ ಪ್ರವಾಸೋದ್ಯಮ ಇಲಾಖೆ ಮತ್ತೆ ನಿರ್ಲಕ್ಷ್ಯ ವಹಿಸುತ್ತಿದೆ.