Putturu : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಪ್ರಮುಖ ಆರೋಪಿಗಳಿಬ್ಬರಿಗೆ ಬಿಗ್ ಶಾಕ್ ನೀಡಿದ ಕೋರ್ಟ್ !!

Putturu : ಕರಾವಳಿಯ ಖ್ಯಾತ ‘ಕಲ್ಲೇಗ ಟೈಗರ್ಸ್‌’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರಿಗೆ ನ್ಯಾಯಾಲಯ ಶಾಕ್ ನೀಡಿದೆ.

ಹೌದು, ಕಳೆದ ವರ್ಷ ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಮಾನ್ಯ ಪುತ್ತೂರು‌(Putturu) 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಅಂದಹಾಗೆ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ನೇಮಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಮಹೇಶ್ ಕಜೆ ಅವರು, ‘ಘಟನೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಈಗಾಗಲೇ ಸುಮಾರು 55 ಸಾಕ್ಷ್ಯ ಸಂಗ್ರಹಿಸಿದ್ದು, ಇದೊಂದು ಗಂಭೀರ ಪ್ರಕರಣವಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆಗೆ ಮೊದಲೇ ಆರೋಪಿಗಳನ್ನು ಬಿಡುಗಡೆ ಮಾಡಬಾರದು’ ಎಂದು ವಾದ ಮಂಡಿಸಿದ್ದರು.

ಆರೋಪಿಗಳಿಂದ ಹೈಕೋರ್ಟ್‌ಗೆ ಅರ್ಜಿ:
ಅಕ್ಷಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಅಕ್ಷಯ್ ಅವರ ತಂದೆ ಕಬಕ ಗ್ರಾಮದ ಶೇವಿರೆ ನಿವಾಸಿ, ಕಲ್ಲೇಗ ದೈವಸ್ಥಾನದ ಪರಿಚಾಕರಿಯ ಚಂದ್ರಶೇಖರ್ ಗೌಡ ಅವರು ಪ್ರಾಸಿಕ್ಯೂಷನ್ ಪರ ವಾದಿಸಲು ಮಹೇಶ್ ಕಜೆ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸುವಂತೆ ಗೃಹ ಸಚಿವರ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಳಿಸಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Leave A Reply

Your email address will not be published.