Ullala: ಬಾವನ ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರ ಪಾಲು
Ullala: ಸಾವನ್ನಪ್ಪಿದ ತನ್ನ ತಂಗಿಯ ಗಂಡನ ಪಿಂಡಪ್ರದಾನಕ್ಕೆಂದು ಸಮುದ್ರದ ಬಳಿಗೆ ಬಂದಿದ್ದಂತಹ ಮಹಿಳೆ ಒಬ್ಬರು ಸಮುದ್ರದ ಪಾಲಾಗಿರುವ ಅಚ್ಚರಿ ಘಟನೆ ಉಳ್ಳಾಲ(Ullala )ದಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ (ಡಿ.16) ಸಂಭವಿಸಿದೆ. ದೇರೆಬೈಲ್ ನ ದಿ.ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ.
ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಎಂಬವರು ಕೆಲವು ದಿನಗಳ ಹಿಂದೆ ನಿಧನರಾಗಿದ್ದು, ಸೋಮವಾರ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರ ದಲ್ಲಿ ಸ್ನಾನ ಪ್ರಕ್ರಿಯೆ ಮುಗಿಸುತ್ತಿದ್ದಾಗ ಸಂಬಂಧಿಕರು ನೋಡುತ್ತಿದ್ದಂತೆಯೇ ಕಾಲು ಜಾರಿ ಸಮುದ್ರ ಪಾಲಾಗಿದ್ದಾರೆ.