Parliament : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ – ಮಸೂದೆಯ ಪರ ಹಾಗೂ ವಿರೋಧವಾಗಿ ಬಿದ್ದ ಮತಗಳೆಷ್ಟು?
Parliament : ಲೋಕಸಭೆಯಲ್ಲಿ ಇಂದು ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ವೇಳೆ ಸದಸ್ಯರು ಮಸೂದೆಯ ಪರ ಹಾಗೂ ವಿರೋಧವಾಗಿ ಮತ ಚಲಾಯಿಸಿದ್ದಾರೆ. ಹಾಗಿದ್ರೆ ಈ ಮಸೂದೆಯ ಪರ ಹಾಗೂ ವಿರೋಧವಾಗಿ ಬಿದ್ದ ಮತಗಳೆಷ್ಟು?
ಹೌದು, ಒಂದು ರಾಷ್ಟ್ರ, ಒಂದು ಚುನಾವಣೆ” ಮಸೂದೆ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಪುದುಚೇರಿ ಮತ್ತು ದೆಹಲಿಯ ಎನ್ಸಿಟಿ ಚುನಾವಣೆಗಳನ್ನು ಸರಿಹೊಂದಿಸಲು ಪ್ರಯತ್ನಿಸುವ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಅನ್ನು ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.
ಈ ಮೂಲಕ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆಯಾಗಿದೆ. ಈ ಮಸೂದೆ ಪರವಾಗಿ 269, ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿದ್ದಾವೆ. ಇದೀಗ ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಗಿದೆ.