Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತ; ಓಡಿಲ್ನಾಳದ ಯುವಕ ಸಾವು

Share the Article

Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ  ಸ್ಕೂಟಿನಲ್ಲಿದ್ದ ಯುವಕ ದಾರುಣವಾಗಿ ಸಾವಿಗೀಡಾಗಿದ್ದಾನೆ.  ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ ಗುರುವಾರ ಎನ್‌.ಆರ್.ಪುರ ಎಂಬಲ್ಲಿ ಸಂಭವಿಸಿದೆ.

ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬುವವರ ಪುತ್ರ ಸುಜೇಶ್‌ (26) ಮೃತ ಯುವಕ.

ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ಎಂಬಲ್ಲಿಗೆ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್‌ ಕೆಲಸಕ್ಕೆಂದು ತೆರಳಿದ್ದ ಯುವಕ, ಗುರುವಾರ ಮಧ್ಯಾಹ್ನ ಕೆಲಸದಿಂದ ಊಟ ಮಾಡಲೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಸವಾರನಿಗೆ ತೀವ್ರ ಗಂಭೀರ ಗಾಯವಾಗಿದ್ದು, ಕೂಡಲೇ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ.

Leave A Reply