C T Ravi: ಠಾಣೆಯಲ್ಲಿ ಸಿಟಿ ರವಿ ತಲೆಗೆ ಗಂಭೀರ ಗಾಯ, ‘ನನ್ನನ್ನು ಶೂಟ್ ಮಾಡಿ ಸಾಯಿಸಿ’ ಎಂದು ಪೊಲೀಸರ ವಿರುದ್ಧ ಸಿಟಿ ರವಿ ಆಕ್ರೋಶ !!
C T Ravi: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪದಡಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದೆ. ವಿಚಿತ್ರ ಏನೆಂದರೆ ಸುವರ್ಣಸೌಧದಿಂದಲೇ ಅವರನ್ನು ಪೊಲೀಸರು ಎತ್ತುಕೊಂಡು ಹೋಗಿದ್ದಾರೆ.
ಅಲ್ಲದೆ ಸಿ.ಟಿ. ರವಿ(CT Ravi)ಅವರನ್ನು ಗುರುವಾರ ತಡರಾತ್ರಿಯೇ ಬೆಂಗಳೂರಿಗೆ ಕರೆದೊಯ್ಯಲಾಯಿತು. ತಡರಾತ್ರಿ ಠಾಣೆಯಿಂದ ಅವರನ್ನು ಪೊಲೀಸರು ಹೊತ್ತು ತಂದರು. ಅವರ ತಲೆಗೆ ಪೆಟ್ಟಾಗಿ, ರಕ್ತ ಸೋರಿದ ಗಾಯಗಳು ಕಂಡವು. ಆದರೆ, ಅವರಿಗೆ ಯಾವ ರೀತಿಯ ಪೆಟ್ಟು ಬಿದ್ದಿದೆ ಎಂಬುದು ಗೊತ್ತಾಗಿಲ್ಲ.
ಅಲ್ಲದೆ ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಧರಣಿ ಕುಳಿತ ರವಿ, ನನ್ನನ್ನು ಈ ರೀತಿ ಸುತ್ತು ಹಾಕಿಸುವ ಬದಲು ಶೂಟ್ ಮಾಡಿ ಸಾಯಿಸಿ. ಯಾಕೆ ಹೀಗೆ ರಾತ್ರಿ ಸುತ್ತಾಡಿಸುತ್ತಿದ್ದೀರಿ. ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಬದಲು ಹೀಗೆ ಓಡಾಡುತ್ತಿರುವುದು ಏಕೆ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈ ಕುರಿತು ವಿಡಿಯೋ ಹಂಚಿಕೊಂಡಿರುವ ಸಿ.ಟಿ.ರವಿ ಅವರು, ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು, ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತ್ತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್‌ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ.