Haveri: ಬೆಂಗಳೂರು ರಾ. ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Haveri: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ. ಶಿಗ್ಗಾಂವಿ ತಾಲ್ಲೂಕಿನ ತಡಸ ನೀರಲಗಿ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರುಗಳು ನಜ್ಜುಗುಜ್ಜಾಗಿದೆ. ಮೃತ ದೇಹಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದು, ಅಪಘಾತ ಸಂಭವಿಸಿದಾಗ ಸ್ಥಳದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸಾವು ಕಂಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯವರಾದ ಚಂದ್ರಮ್ಮ (59), ಮೀನಾ (38) (ಚಂದ್ರಮ್ಮ ಅವರ ಪುತ್ರಿ), ಕಾರು ಚಾಲಕ, ಮಾಲೀಕ ಮಹೇಶ್ ಕುಮಾರ್ ಸಿ. (41) ದಾವಣಗೆರೆ ಜಿಲ್ಲೆ,
ಧನವೀರ್ (11) ದಾವಣಗೆರೆ ಜಿಲ್ಲೆ ಹರಿಹರದವರು ಮೃತರು.

ಘಟನಾ ಸ್ಥಳಕ್ಕೆ ತಡಸ ಪೊಲೀಸರು, ಹಾವೇರಿ ಎಸ್‌.ಪಿ. ಅಂಶುಕುಮಾರ್‌ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.