Bengaluru : ಮುನಿರತ್ನ ತಲೆಗೆ ಮೊಟ್ಟೆ ಎಸೆದ ಆರೋಪಿ ಅರೆಸ್ಟ್- ಆತ ಬಿಜೆಪಿಗನೋ ಇಲ್ಲ ಕಾಂಗ್ರೆಸ್ಸಿಗನೋ?

Share the Article

Bengaluru : : ಬೆಂಗಳೂರಿನ ಆರ್‌ಆರ್ ನಗರ (RR Nagar) ಕ್ಷೇತ್ರದ ಬಿಜೆಪಿ ಶಾಸಕ (BJP MLA) ಮುನಿರತ್ನ (Munirathna) ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ (Attack) ಮಾಡಿದ್ದು ವೈದ್ಯರ ಸಲಹೆಯ ಮೇರೆಗೆ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ (KC General Hospital) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬೆನ್ನಲ್ಲೇ ಮೊಟ್ಟೆ ಎಸೆದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಕೃತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಈ ಬೆನ್ನಲ್ಲೇ ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯಾರು..? ಯಾಕೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Leave A Reply