ಭಾನುವಾರ, 25 ಅಕ್ಟೋಬರ್ 2026

Manmohan Singh: ಜನಸಾಮಾನ್ಯರಿಗೆ ಮನ್ಮೋಹನ್ ಸಿಂಗ್ ನೀಡಿದ ಈ 5 ಕೊಡುಗೆಗಳನ್ನು ಎಂದೆಂದಿಗೂ ಮರೆಯಲಾಗದು

Manmohan Singh: ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ಇಡೀ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮನಮೋಹನ್ ಸಿಂಗ್ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

Manmohan Singh: ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ಇಡೀ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮನಮೋಹನ್ ಸಿಂಗ್ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ದೆಹಲಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ದಶಕಗಳ ಕಾಲ ದೇಶದ ಪ್ರಧಾನಿಯಾಗಿ ಕರ್ತವ್ಯ ನಿರ್ವಹಿಸಿದ ಡಾಕ್ಟರ್ ಮನಮೋಹನ್ ಸಿಂಗ್ ಅವರು ಭಾರತದ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅದರೊಂದಿಗೆ ಅವರು ಅನೇಕ ಜನ ಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳಲ್ಲಿ ಸಿಂಗ್ ನೀಡಿದ ಈ 5 ಕೊಡುಗೆಗಳನ್ನು ಎಂದೆಂದಿಗೂ ಮರೆಯಲಾಗದು.

Sponsored

1. ಶಿಕ್ಷಣ ಹಕ್ಕು ಕಾಯಿದೆ (2009)
ಡಾ. ಸಿಂಗ್ ಅವರ ಸರ್ಕಾರವು 6 ರಿಂದ 14 ವರ್ಷ ವಯಸ್ಸಿನ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕನ್ನು ನೀಡಿತು. ಈ ಕಾನೂನು ಮಕ್ಕಳಿಗೆ ಅವರ ಮೂಲಭೂತ ಹಕ್ಕುಗಳನ್ನು ಒದಗಿಸುವ ದಿಕ್ಕಿನಲ್ಲಿ ಒಂದು ಮೈಲಿಗಲ್ಲಾಗಿದೆ.

Marriage AdMarriage AdSponsored

2. ಮಾಹಿತಿ ಹಕ್ಕು (2005)
ಈ ಕಾನೂನು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಸರ್ಕಾರದ ಮಾಹಿತಿಯನ್ನು ಪ್ರವೇಶಿಸುವ ಹಕ್ಕನ್ನು ನೀಡಿತು, ಆ ಮೂಲಕ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ.

3. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (2013)
ಈ ಕಾನೂನಿನ ಮೂಲಕ ದೇಶದ ಮೂರನೇ ಎರಡರಷ್ಟು ಕುಟುಂಬಗಳಿಗೆ ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳು ಲಭ್ಯವಾಗುವಂತೆ ಮಾಡಲಾಯಿತು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಈ ಹೆಜ್ಜೆ ವರದಾನವಾಗಿದೆ.

4. ಭೂ ಸ್ವಾಧೀನ ಕಾಯಿದೆ (2013)
ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ಸ್ವಾಧೀನಪಡಿಸಿಕೊಂಡಾಗ ಸಂತ್ರಸ್ತರಿಗೆ ಸೂಕ್ತ ಪರಿಹಾರವನ್ನು ಖಾತರಿಪಡಿಸಲಾಯಿತು.

5. ಅರಣ್ಯ ಹಕ್ಕು ಕಾಯಿದೆ (2006)
ಬುಡಕಟ್ಟು ಸಮುದಾಯವು ತಮ್ಮ ಸಾಂಪ್ರದಾಯಿಕ ಭೂಮಿ ಹಕ್ಕುಗಳನ್ನು ಮರಳಿ ಪಡೆಯುವ ಐತಿಹಾಸಿಕ ಹೆಜ್ಜೆಯಾಗಿದೆ.

Comments are closed.